Ripponpete

ಕೋಡೂರು ಬಳಿ ಜಮೀನಿನಲ್ಲಿ ಕಾಡುಕೋಣ ಸಾವು, ವಿದ್ಯುತ್ ಶಾಕ್ ಕೊಟ್ಟು ಹತ್ಯೆಗೈದ ಶಂಕೆ !

ರಿಪ್ಪನ್‌ಪೇಟೆ ; ವಿದ್ಯುತ್ ಶಾಕ್ ತಗುಲಿ ಕಾಡುಕೋಣವೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಖವಳ್ಳಿ ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/19mYutBsmN/

ಶಾಖವಳ್ಳಿ ಗ್ರಾಮದ ಸ.ನಂ. 9 ರಲ್ಲಿ ಈ ಘಟನೆ ನಡೆದಿದ್ದು ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಸಮೀಪದಲ್ಲಿಯೇ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದ್ದಾರೆ.

ವಿದ್ಯುತ್ ಶಾಕ್ ಕೊಟ್ಟು ಹತ್ಯೆಗೈದ ಶಂಕೆ!?

ಕಾಡುಕೋಣವೊಂದನ್ನು ವಿದ್ಯುತ್ ಶಾಕ್ ನೀಡಿ ಹತ್ಯೆಗೈದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಶಾಖವಳ್ಳಿ ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ‌. ಈ ಸಂದರ್ಭದಲ್ಲಿ ಶಾಖವಳ್ಳಿ ಗ್ರಾಮದ ಸ.ನಂ. 9 ರಲ್ಲಿ ಗದ್ದೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿದ್ದ ವಿದ್ಯುತ್ ಕಂಬದಿಂದ ಬೇಲಿಗೆ ವಿದ್ಯುತ್ ಸಂಪರ್ಕ ಪಡೆದಿದ್ದು ಕಂಡುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಮಾತನಾಡಿದ ಸಾಗರ ವಲಯ ಡಿಎಫ್ಓ ಮೋಹನ್ ಕುಮಾರ್, ವಿದ್ಯುತ್ ಪ್ರವಹಿಸಿ ಕಾಡುಕೋಣ ಮೃತಪಟ್ಟಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ. ಸಂಬಂಧಪಟ್ಟ ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಕಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂಧರ್ಭದಲ್ಲಿ ಎಸಿಎಫ್ ಮೋಹನ್ ಕುಮಾರ್, ಹೊಸನಗರ ಆರ್.ಎಫ್.ಓ ಅನಿಲ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಹಾಲೇಶ್, ಸಿಬ್ಬಂದಿಗಳಾದ ಮಂಜುನಾಥ್, ಚಳ್ಳಯ್ಯ ಹಾಗೂ ಇನ್ನಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!