CHIKKAMAGALURU | ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ತೋಟದ ಬೇಲಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಯ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಳಗಾಮೆ ಗ್ರಾಮದಲ್ಲಿರುವ ಆಶ್ರಯ ಕಾಫಿ ಎಸ್ಟೇಟ್ ಬಳಿ ಸೋಮವಾರ ಮಧ್ಯರಾತ್ರಿ ಆಹಾರ ಅರಸಿ ಕಾಡಾನೆಯೊಂದ ಬಂದಿದೆ. ತೋಟಕ್ಕೆ ನುಗ್ಗಲು ಯತ್ನಿಸಿದ್ದ ವೇಳೆ ಕಾಫಿ ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಪ್ರಾಣ ಬಿಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತ ಕಾಡಾನೆಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ತೋಟದ ಬೇಲಿಗೆ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿ ಕಾಡಾನೆ ಸಾವಿಗೆ ಕಾರಣರಾದ ಎಸ್ಟೇಟ್ ಮಾಲಿಕರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಆನೆಗೆ 35 ವರ್ಷ ವಯಸ್ಸಿರಬಹುದು. ಮುತ್ತೋಡಿ ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕಿಕೊಂಡು ಬಂದಾಗ ಈ ಅವಘಡ ಸಂಭವಿಸಿದೆ.
– ರಮೇಶ್ ಬಾಬು, ಉಪ ಅರಣ್ಯ ಸಂರಕ್ಷಣಾಧಿಕಾರಿ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.