ಶಿವಮೊಗ್ಗ

ಅಕ್ರಮ ವಿದ್ಯುತ್ ತಂತಿ ಬೇಲಿಗೆ ಕಾಡಾನೆ ಬಲಿ: ಎಲ್ಲಿದು?

ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.

Elephant Dies Shivamogga 1

ಶಿವಮೊಗ್ಗ: ಕಾಡುಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಶಂಕರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬರುವ ಜಮೀನೊಂದರ ಸುತ್ತ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಲಾಗಿತ್ತು ಎನ್ನಲಾಗಿದೆ.

ಕಾಡಿನಿಂದ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ನಾಡಿನತ್ತ ಬಂದಿದ್ದ ಆನೆಯು ಜಮೀನಿನ ಬಳಿ ಅಳವಡಿಸಿದ್ದ ವಿದ್ಯುತ್ ತಂತಿಯ ಸಂಪರ್ಕಕ್ಕೆ ಬಂದಿದೆ. ಇದರಿಂದ ವಿದ್ಯುತ್ ಆಘಾತಕ್ಕೊಳಗಾದ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಯ ಸಾವಿನ ಸುದ್ದಿ ತಿಳಿದು ಸ್ಥಳೀಯರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ಕಾಡುಪ್ರಾಣಿಗಳ ಬೇಟೆಗಾಗಿ ವಿದ್ಯುತ್ ತಂತಿ ಅಳವಡಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರ ಪತ್ತೆಗೆ ಅರಣ್ಯ ಇಲಾಖೆ ಮುಂದಾಗಿದೆ. ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಿದವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ.

ವನ್ಯಜೀವಿಗಳ ಸಂರಕ್ಷಣೆಯ ದೃಷ್ಟಿಯಿಂದ ಇಂತಹ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]