ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಉದ್ಯಮಿ ಉಮೇಶ್ ಹಾಲಗದ್ದೆ

Written by Mahesha Hindlemane

Published on:

ಹೊಸನಗರ ; ಯಾವುದೇ ಕ್ರೀಡಾ ಚಟುವಟಿಕೆಗಳಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ.  ಕ್ರೀಡಾಪಟುಗಳು ಆಸಕ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಅತಿಮುಖ್ಯ. ಆದರೆ, ಸ್ಪರ್ಧಾಳು ಇದನ್ನು ಸ್ಪೂರ್ತಿಯಿಂದ ತೆಗೆದುಕೊಳ್ಳಬೇಕೆ ವಿನಃ ಯಾವುದೇ ಗೊಂದಲಕ್ಕೆ ಎಡೆಮಾಡಿ ಕೊಡಬಾರದು ಎಂದು ಬಿಜೆಪಿ ಮುಖಂಡ, ಉದ್ಯಮಿ ಹಾಲಗದ್ದೆ ಉಮೇಶ್ ತಿಳಿಸದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ತಾಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಶ್ರೀ ಅಮೃತಮಯಿ ಪ್ರೌಢಶಾಲಾ  ಆವರಣದಲ್ಲಿ ಹಮ್ಮಿಕೊಂಡಿದ್ದ ನಗರ ವಲಯ ಮಟ್ಟದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ನೀಡುವ ವಿವಿಧ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ಸಾಧಿಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯವೆಂದರು.

ಈ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿನಯ್ ಹೆಗ್ಡೆ ಕರ್ಕಿ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ  ಬಾಲಚಂದ್ರ ರಾವ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಗೀತಾ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಪಿಡಿಒ ನಾಗರಾಜ್, ಶಿಕ್ಷಕ ವಾಸಪ್ಪ, ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿ ರಾಜೇಶ್ ಹಿರಿಮನೆ, ಶಿಕ್ಷಕಿ ರೇಖಾ ಕುಲಾಲ್ ಸೇರಿದಂತೆ ಹಲವು ಶಿಕ್ಷಕರು, ಪೋಷಕ ವೃಂದ, ಕ್ರೀಡಾಸಕ್ತರು ಉಪಸ್ಥಿತರಿದ್ದರು.

Leave a Comment