RIPPONPETE ; ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಭತ್ತ, ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಎಂಬ ಮಹಿಳೊ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ತಕ್ಷಣ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ.

ಕೈಗೆ ಬಂದು ತುತ್ತು ಬಾಯಿಗೆ ಬರಲಿಲ್ಲ ಎಂಬ ಚಿಂತೆಯಲ್ಲಿ ಈ ಭಾರಿ ಒಳ್ಳೆಯ ಬೆಳೆ ಬರುವುದೆಂಬ ಆಶಾಭಾವನೆಯಲ್ಲಿ ತಳಲೆ ಸಹಕಾರ ಬ್ಯಾಂಕ್‌ನಲ್ಲಿ ಮತ್ತು ಜಿಲ್ಲಾ ಸಹಕಾರ ಸಂಘದ ಸ್ವಸಹಾಯ ಸಂಘದಲ್ಲಿ ಮತ್ತು ಖಾಸಗಿಯಾಗಿ ಒಟ್ಟು 7 ಲಕ್ಷ ರೂ. ಸಾಲವನ್ನು ಪಡೆಯಲಾಗಿ ಅಕಾಲಿಕ ಮಳೆಯಿಂದ ಬೆಳೆ ನಾಶಗೊಂಡ ಪರಿಣಾಮ ಮಾಡಿದ ಸಾಲವನ್ನು ಮರುಪಾವತಿಸುವುದು ಹೇಗೆ ಎಂಬ ಮಾನಸಿಕ ಚಿಂತೆಯಲ್ಲಿ ಬಳಲಿ ಕೊನೆಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತರ ಪುತ್ರ ಮಾಲತೇಶ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಕೇಸ್ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.