ರಿಪ್ಪನ್‌ಪೇಟೆ ; ಹೊಸನಗರ ರಸ್ತೆಯ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಚಿಪ್ಪಿಗೆರೆ ಕೆರೆಗೆ ಮಂಗಳವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಬಲೆನೊ ಕಾರು ಮಗುಚಿ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1G2eorraXT/
ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಹುತ್ತದಿಂಬ ನಿವಾಸಿ ಪಾರ್ವತಮ್ಮ (65 ) ಮೃತ ಮಹಿಳೆ. ಚಾಲಕ ಸೇರಿದಂತೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಕಾರು ಚಾಲನೆ ಮಾಡುತ್ತಿದ್ದ ಮಂಜುನಾಥ್ (21) ಸಹ ಪ್ರಯಾಣಿಕ ಸಹೋದರಿ ಅಕ್ಷತಾ (23) ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆಗೆ ಬಂದಿದ್ದ ಇವರು, ದೇವಿಯ ದರ್ಶನ ಪಡೆದು ಊರಿಗೆ ಮರಳುವಾಗ ಈ ದುರ್ಘಟನೆ ನಡೆದಿದೆ.

ಮೊಮ್ಮಕ್ಕಳೊಂದಿಗೆ ದೇವಿಯ ದರ್ಶನ ಪಡೆಯಲು ಬಂದಿದ್ದ ಮಹಿಳೆ ಇಹಲೋಕ ಸೇರಿದ್ದು ವಿಪರ್ಯಾಸ. ಕಾರು ನೀರಿಗೆ ಬೀಳುತ್ತಿದ್ದಂತೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸ್ಥಳೀಯ ಯುವಕರಾದ ಗವಟೂರಿನ ಗಿರೀಶ್, ಮುತ್ತಲೀಬ್ ಹಾಗೂ ಇಮ್ರಾನ್ ಇಬ್ಬರು ನೀರಿಗೆ ಧುಮುಕಿ ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಯುವಕರ ಈ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1FkQumcpEK/
ರಿಪ್ಪನ್‌ಪೇಟೆಯಲ್ಲಿ ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲು ನೆರವಾದರು.
ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.