ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಿಗಂದೂರಿನಿಂದ ತೀರ್ಥಹಳ್ಳಿಗೆ ವಾಪಸ್ ಆಗುವಾಗ ಗೊರಗೋಡು ಗ್ರಾಮದ ಬಳಿ ಕಾರು ಅಪಘಾತಕ್ಕಿಡಾಗಿದೆ. ಕಾರಿನಲ್ಲಿದ್ದ ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಮೃತ ಮಹಿಳೆ ಮತ್ತು ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ತಿಳಿದು ಬಂದಿದೆ. ಮೃತರ ಹೆಸರು ತಿಳಿದುಬಂದಿಲ್ಲ. ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





