ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಿಗಂದೂರಿನಿಂದ ತೀರ್ಥಹಳ್ಳಿಗೆ ವಾಪಸ್ ಆಗುವಾಗ ಗೊರಗೋಡು ಗ್ರಾಮದ ಬಳಿ ಕಾರು ಅಪಘಾತಕ್ಕಿಡಾಗಿದೆ. ಕಾರಿನಲ್ಲಿದ್ದ ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಮೃತ ಮಹಿಳೆಯನ್ನು ಪ್ರೇಮಲತಾ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರೆಲ್ಲರೂ ಬೆಂಗಳೂರು ಮೂಲದವರಾಗಿದ್ದಾರೆ. ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

