ಕೌಟುಂಬಿಕ ಕಲಹ ; ವಿಷ ಸೇವಿಸಿದ್ದ ಮಹಿಳೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ

Written by Mahesha Hindlemane

Published on:

ಶಿವಮೊಗ್ಗ ; ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪೂಜಾ (30) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಶಂಕರಹಳ್ಳಿ ವಾಸಿ ಈಶ್ವರಪ್ಪ ಎಂಬುವರ ಪುತ್ರಿ ಪೂಜಾಳನ್ನ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ವಿಷ ಕೊಟ್ಟು ಕೊಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೂಜಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.

ಪೂಜಾ ದಂಪತಿಗಳಿಗೆ ಎರಡು ವರ್ಷದ ಗಂಡು ಮಗುವಿತ್ತು. ಶರತ್ ತಂದೆ, ತಾಯಿ ಹಾಗೂ ಶರತ್ ನ ಸಹೋದರಿ ಶಬರಿ ಸೇರಿ ಪೂಜಾಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಮತ್ತೆ ಇದೇ ವಿಚಾರವಾಗಿ ಪೂಜಾ ಮೇಲೆ ಹಲ್ಲೆ ನಡೆದಿತ್ತು. ಪೂಜಾ ಗಂಡನ ಟಾರ್ಚರ್ ಬಗ್ಗೆ ತನ್ನ ತವರಿನ ಸದಸ್ಯರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ.

ತವರುಮನೆಯವರಿಂದ ಸಮಾಧಾನ ಮಾಡಲಾಗಿತ್ತು. ಎರಡು ದಿನಗಳ ಹಿಂದೆ ಕಳೆನಾಶಕ ಕೊಟ್ಟು ಕೊಲೆಗೆ ಯತ್ನಿಸಲಾಗಿತ್ತು. ಇದನ್ನು ಆತ್ಮಹತ್ಯೆ ಅಂತಾ ಗಂಡನ ಕುಟುಂಬ ಬಿಂಬಿಸಲು ಯತ್ನಿಸಲಾಗಿತ್ತು.

ಪತಿ, ಮಾವನ ಬಂಧನ !

ಪೂಜಾಳ ಕುಟುಂಬ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಶರತ್ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದರು. ಪೂಜಾಳನ್ನ ಕಳೆದುಕೊಂಡ ಪೂಜಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪತಿ ಶರತ್ ಹಾಗೂ ಆತನ ತಂದೆ ಸುಧಾಕರ್ ರನ್ನ ಪೊಲೀಸರು ಬಂಧಿಸಿದ್ದಾರೆ. ಅತ್ತೆ ರಾಧಾ ಮತ್ತು ಗಂಡನ ಅಕ್ಕ ಶಬರಿ ನಾಪತ್ತೆಯಾಗಿದ್ದಾರೆ.

ಘಟನೆ ಹಿನ್ನೆಲೆ ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment