ರಿಪ್ಪನ್‌ಪೇಟೆ ; ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಸಾಗರ ರಸ್ತೆಯ ವಡಗೆರೆ ಸಮೀಪ ನಡೆದಿದೆ.
ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ಅಮೃತಾ ತಮ್ಮ ಪತಿ ನಾಗರಾಜ್ ಹಾಗೂ ಇಬ್ಬರು ಮಕ್ಕಳೊಂದಿಗೆ ಶಿಕಾರಿಪುರದಿಂದ ರಿಪ್ಪನ್‌ಪೇಟೆಗೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ತಂಗಿಯ ಮನೆಗೆ ಪಲ್ಸರ್ ಬೈಕ್‌ನಲ್ಲಿ ಆಗಮಿಸುತ್ತಿದ್ದ ವೇಳೆ, ವಡಗೆರೆ ಬಳಿ ಬ್ರೇಕ್ ಹಾಕಿದ ಸಮಯದಲ್ಲಿ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಮೃತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ನಾಗರಾಜ್ ಹಾಗೂ ಮಗು ಗಾಯಗೊಂಡಿದ್ದು, ಅವರನ್ನು ತಕ್ಷಣ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





