Accident

ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ (40) ಎಂದು ಗುರುತಿಸಲಾಗಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿದೆ. ಮೃತ ರೂಪಾ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರೂಪಾ ಪತಿ ಕಾಂತರಾಜ್ ಹಾಗೂ ರೂಪಾ ಸಹೋದರಿ ರೇಖಾ ಅವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ಇನ್ನೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಅವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]