Dengue | ಮಹಾಮಾರಿ ಡೆಂಗ್ಯೂಗೆ ರಿಪ್ಪನ್‌ಪೇಟೆ ಮಹಿಳೆ ಬಲಿ !

Written by malnadtimes.com

Published on:

RIPPONPETE | ತೀವ್ರ ಜ್ವರದಿಂದ ಬಳಲುತ್ತಿದ್ದ ರಿಪ್ಪನ್‌ಪೇಟೆ ರಶ್ಮಿ ಆರ್ ನಾಯಕ್ ಶಿವಮೊಗ್ಗ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ‌.

WhatsApp Group Join Now
Telegram Group Join Now
Instagram Group Join Now

ಮಲೆನಾಡಿನಲ್ಲಿ ಮತ್ತೆ ಕ್ಷೀಣಿಸಿದ ವರುಣ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಇಲ್ಲಿನ ನಾಯಕ್ ಫರ್ಟಿಲೈಜರ್ಸ್ ಮಾಲೀಕ ರಾಮದಾಸ್ ನಾಯಕ್‌ರವರ ಪುತ್ರ ರಾಘವೇಂದ್ರ ನಾಯಕ್ ಅವರ ಪತ್ನಿ ರಶ್ಮಿ ಆರ್.ನಾಯಕ್ (42) ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು ಶಿವಮೊಗ್ಗದ ಖಾಸಗಿ ಸರ್ಜಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದು ಚಿಕಿತ್ಸೆ  ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ಸಾಕಷ್ಟು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದರೂ ಕೂಡಾ ಸ್ಥಳೀಯ  ಆರೋಗ್ಯ ಇಲಾಖೆಯವರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸಾರ್ವಜನಿಕರು ಆಡಿಕೊಳ್ಳುವಂತಾಗಿದೆ.

ಜ್ವರ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಬಂದರೆ ಸರಿಯಾಗಿ ವೈದ್ಯಾಧಿಕಾರಿಗಳು ಇರುವುದಿಲ್ಲ, ಕೇಳಿದರೆ ಡೆಂಗ್ಯೂ ಬಗ್ಗೆ  ಗೊತ್ತಿಲ್ಲದವರಂತೆ  ಮೌನವಹಿಸುತ್ತಾರೆ. ಸರ್ಕಾರ ನಿತ್ಯ ಡೆಂಗ್ಯೂ ಬಗ್ಗೆ ಜಾಗೃತಿ ವಹಿಸಿದರೂ ಕೂಡಾ ಇಲ್ಲಿನ ಆಸ್ಪತ್ರೆಯಲ್ಲಿ ಮಾತ್ರ ‘ಎಮ್ಮೆ ಮೇಲೆ ಮಳೆ ಬಂದವರಂತೆ’ ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲದವರಂತೆ ಇರುವುದು ಈ ಮಹಿಳೆ ಜ್ವರಕ್ಕೆ ಬಲಿಯಾಗುವಂತಾಗಿದೆ ಎಂದು ಸಾರ್ವಜನಿಕರಲ್ಲಿ ತೀವ್ರ ಅಸಮಾದಾನಕ್ಕೆ ಕಾರಣವಾಗಿದೆ.

ಇನ್ನಾದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸ್ಥಳೀಯ ಆಸ್ಪತ್ರೆಗೆ ಕಾಯಕಲ್ಪ ನೀಡುವತ್ತ ಗಮನಹರಿಸುವರೇ ಕಾದು ನೋಡಬೇಕಾಗಿದೆ.

SHIVAMOGGA | ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು !

Leave a Comment