ಕಾಡಾನೆ ದಾಳಿಗೆ ಮಹಿಳೆ ಬ*ಲಿ !

Written by ಮಹೇಶ ಹಿಂಡ್ಲೆಮನೆ

Published on:

ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ (25) ಮೃತ ಮಹಿಳೆ. ಅನಿತಾ ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು, ಲೈನ್ ಮನೆಯಲ್ಲಿ ವಾಸ ಮಾಡುತ್ತಿದ್ದರು. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ.

ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಅನಿತಾ ಅವರಿಗೆ ಚಿಕಿತ್ಸೆ ಕೊಡಿಸಿ, ಬಳಿಕ ಶಿವಮೊಗ್ಗಕ್ಕೆ ರವಾನಿಸಲಾಗುತ್ತಿತ್ತು. ಆದರೆ ಶಿವಮೊಗ್ಗ ಹೋಗುವಾಗ ಮಾರ್ಗ ಮಧ್ಯೆ ಅನಿತಾ ಮೃ*ತಪಟ್ಟಿದ್ದಾರೆ.

ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment