ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾ.ಪಂ. ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೈಸೂರು ಮೂಲದ ವಿಜಯ್ (30) ಸಾವನ್ನಪ್ಪಿದ ಕಾರ್ಮಿಕ. ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಕಂಬವೇರಿದ್ದ ಕಾರ್ಮಿಕ ವಿಜಯ್ ಕಂಬ ತುಂಡಾದ ಹಿನ್ನೆಲೆಯಲ್ಲಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಈತನನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು. ಆದರೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

