ಶಿವಮೊಗ್ಗ

ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ ; ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮಿಪುರ ಗ್ರಾಮದ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ದುರ್ದೈವಿ. ಅಡಿಕೆ ಗೊನೆ ಕೊಯ್ಯುವಾಗ ಆಕಸ್ಮಿಕವಾಗಿ ದೋಟಿ ವಿದ್ಯುತ್ ತಂತಿಗೆ ತಗುಲಿ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರೈತ ಸುಂದರೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಮೃತ ಸತೀಶ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!