ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ‘ವಿಶ್ವ ಪೋಲಿಯೋ ದಿನ’ವನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷ ರವೀಂದ್ರ ಬಲ್ಲಾಳ್, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಮತ್ತೆ ಪೋಲಿಯೊ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನಜಾಗೃತಿ ಮೂಡಿಸಲಾಗುತ್ತಿದೆ. ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕಿಸುವುದು ಕಡ್ಡಾಯವಾಗಿದೆ. ಪ್ರತಿ ಗುರುವಾರ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿದ್ದು, ಡಿಸೆಂಬರ್ 5 ರಂದು ರಾಷ್ಟ್ರವ್ಯಾಪಿ ಪಲ್ಸ್ ಪೋಲಿಯೋ ಹನಿ ಹಾಕಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ರಮೇಶ್ ಎಸ್. ಹೆಬ್ಬಾರ್, ಹಿರಿಯ ಆರೋಗ್ಯ ಕಾರ್ಯಕರ್ತ ಆರ್. ಗಣೇಶ್, ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜೊತೆಗೆ ಜೆ. ರಾಧಾಕೃಷ್ಣ, ಕೃಷ್ಣರಾಜ್, ಗಣೇಶ್ ಕಾಮತ್, ಹೆಚ್.ಎಂ. ವರ್ತೇಶ್ ಗೌಡ, ಶಿವಕುಮಾರ್ ಶೆಟ್ಟಿ, ವರ್ಗೀಸ್, ಡಾಕಪ್ಪ ಮುಡುಬ, ತಾನಾರಾಂ, ಸಂತೋಷ್ ಹಾಗೂ ರಾಮಚಂದ್ರ ಸೇರಿದಂತೆ ಹಲವರು ಹಾಜರಿದ್ದರು.

