Hombuja

ಹೊಂಬುಜದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ | ಶೀಘ್ರದಲ್ಲೇ AI ಮೂಲಕ ಕ್ಷೇತ್ರದ ಇತಿಹಾಸ ಮರುಸೃಷ್ಟಿ ; ಶ್ರೀಗಳು

ಇತಿಹಾಸ-ಸಂಸ್ಕೃತಿಯ ಪರಿಚಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಕ್ತರು ಧಾರ್ಮಿಕ ತಾಣಗಳ ದರ್ಶನದ ಜೊತೆಗೆ ಪ್ರಕೃತಿ ಸೌಂದರ್ಯದ ತಾಣಗಳಿಗೂ ಭೇಟಿ ನೀಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.

ಹೊಂಬುಜದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ Hombuja

ಹೊಸನಗರ : ಪ್ರವಾಸ ಕೈಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದಲ್ಲದೆ, ಬೌದ್ಧಿಕ ವಿಕಾಸ ಹಾಗೂ ನಮ್ಮ ಇತಿಹಾಸ-ಸಂಸ್ಕೃತಿಯ ಪರಿಚಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಕ್ತರು ಧಾರ್ಮಿಕ ತಾಣಗಳ ದರ್ಶನದ ಜೊತೆಗೆ ಪ್ರಕೃತಿ ಸೌಂದರ್ಯದ ತಾಣಗಳಿಗೂ ಭೇಟಿ ನೀಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.

WhatsApp Group Join Now
Telegram Group Join Now
Instagram Group Join Now

ಶ್ರೀಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ’ಗೆ ಚಾಲನೆ ನೀಡಿ ಆಶೀರ್ವಚನ ನೀಡಿದ ಶ್ರೀಗಳು, ನಮ್ಮ ಸುತ್ತಮುತ್ತಲಿನ ಐತಿಹಾಸಿಕ, ಧಾರ್ಮಿಕ ಹಾಗೂ ನೈಸರ್ಗಿಕ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಪ್ರವಾಸಿ ತಾಣಗಳನ್ನು ನಿರ್ಮಲವಾಗಿರಿಸುವ ಮೂಲಕ ಯಾತ್ರಾರ್ಥಿಗಳನ್ನು ಆಕರ್ಷಿಸಬೇಕು ಮತ್ತು ನಾಡಿನ ಪರಂಪರೆಯನ್ನು ಅರಿಯಲು ಪ್ರೇರಣೆ ನೀಡಬೇಕು. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸುವ ಯೋಜನೆಗಳು ಮತ್ತು ಅನುದಾನಗಳು ಇನ್ನಷ್ಟು ಜನಪರವಾಗಿರಲಿ ಎಂದು ಶ್ರೀಗಳು ಆಶಯ ವ್ಯಕ್ತಪಡಿಸಿದರು.

ಹೊಂಬುಜದಲ್ಲಿ ಎಐ (AI) ತಂತ್ರಜ್ಞಾನದ ಬಳಕೆ:

ಶಿವಮೊಗ್ಗ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅನೇಕ ಧಾರ್ಮಿಕ ಹಾಗೂ ಪರಿಸರ ಪ್ರವಾಸಿ ತಾಣಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದ ಸ್ವಾಮೀಜಿ, ಸುಮಾರು 1400 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಹೊಂಬುಜ ಶ್ರೀಕ್ಷೇತ್ರವು ಸಂಪೂರ್ಣ ಗಣಕೀಕೃತಗೊಂಡಿದೆ ಎಂದು ತಿಳಿಸಿದರು. ಕ್ಷೇತ್ರದ ಆಡಳಿತದಲ್ಲಿ ಈಗಾಗಲೇ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಕ್ಷೇತ್ರದ ಪೌರಾಣಿಕ ಐತಿಹ್ಯ ಹಾಗೂ ಇತಿಹಾಸವನ್ನು ಎಐ ತಂತ್ರಜ್ಞಾನದ ಮೂಲಕ ಮರುಸೃಷ್ಟಿಸಿ ಭಕ್ತರಿಗೆ ದೃಶ್ಯರೂಪದಲ್ಲಿ ಕಟ್ಟಿಕೊಡಲಾಗುವುದು ಎಂದು ಪ್ರಕಟಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಧರ್ಮಪ್ಪ ಅವರು ಪ್ರವಾಸೋದ್ಯಮದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪ್ರವಾಸಿಗರು ಪಾಲ್ಗೊಂಡಿದ್ದರು.

ದೇವೇಂದ್ರ ಅತಿಥಿಗಳನ್ನು ಸ್ವಾಗತಿಸಿದರು. ಶಾಲಿನಿ ಮೋಹನ್ ಪ್ರಾರ್ಥನೆ ನೆರವೇರಿಸಿ, ವಂದನಾರ್ಪಣೆ ಮಾಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!