ಹೊಸನಗರ: ಹೊಸನಗರ ತಾಲ್ಲೂಕಿನ ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಕಾರ್ಯನಿರ್ವಹಣೆಗಾಗಿ ‘ಉತ್ತಮ ಸಂಘ’ ಪ್ರಶಸ್ತಿಗೆ ಪಾತ್ರವಾಗಿದೆ.
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಜಿಲ್ಲಾ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರು ಯಡೂರು ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬ್ಯಾಂಕಿನ ನಿರ್ದೇಶಕ ಎಂ.ಎಂ. ಪರಮೇಶ್ವರ್, ಯಡೂರು ಸಂಘದ ಅಧ್ಯಕ್ಷ ಮಂಜುನಾಥ್ ಹೊಸಗದ್ದೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಹೊಸಗದ್ದೆ, ಉಪಾಧ್ಯಕ್ಷ ಅಜಿತ್ ಹಿರೇಬೈಲ್ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕರಾದ ರಮೇಶ್ ಅಚ್ಚುಮನೆ, ಮಂಜುನಾಥ್ ಹಿರೇಬೈಲ್, ಕಿರಣ್ ಯಡೂರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

