ಹೊಸನಗರ

ಯೋಗವು ಕೇವಲ ದೈಹಿಕ ಕಸರತ್ತಲ್ಲ ದೇಹ ಮನಸ್ಸು ಮತ್ತು ಆಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮ : ಹೆಚ್.ಆರ್. ಸುರೇಶ್

ಹೊಸನಗರ : ಯೋಗವು ಕೇವಲ ದೈಹಿಕ ಕಸರತ್ತು ಮಾಡುವುದು ಮಾತ್ರವಲ್ಲ ಯೋಗ ಮಾಡುವುದರಿಂದ ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ಮಾವಿನಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಆರ್ ಸುರೇಶ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಇಂದು 12ನೇ ರಾಷ್ಟ್ರೀಯ ಯೋಗದಿನಾಚರಣೆಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನಡೆಸಿ ಮಾತನಾಡಿದ ಅವರು, ಯೋಗವು ಭಾರತೀಯ ಸಂಸ್ಕೃತಿಯ ಈ ಅಮುಲ್ಯ ಕೊಡಿಗೆಯನ್ನು ಇಡೀ ಜಗತ್ತಿಗೆ ತಲುಪಿಸಿದ ಹೆಮ್ಮೆ ನಮ್ಮದಾಗಿದೆ. ನಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಒಂದು ನಿರಂತರ ಹವ್ಯಾಸವಾಗಿಸಿಕೊಂಡು ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಪಣ ತೊಡೋಣ ಎಂದರು.

ವಿದ್ಯಾರ್ಥಿಗಳು ಅತ್ಯಂತ ಶ್ರದ್ದೆ ಮತ್ತು ಉತ್ಸಾಹದಿಂದ ಯೋಗ ಕಾರ್ಯಕ್ರಮದಲ್ಲಿ ಭಾಗವಸಿದರು. ಈ 12ನೇ ರಾಷ್ಟೀಯ ಯೋಗ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆರ್, ಸುರೇಶ್, ವೇದಾಬಾಯಿ, ರಾಧ, ಶರ್ಮದಾ, ಸವಿತಾ, ರಕ್ಷಿತಾ, ಆಶಾ, ಶಿಲ್ಪಾ ಎಸ್‌ಡಿಎಂಸಿ ಅಧ್ಯಕ್ಷ ಗುರುರಾಜ್ ಆರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]