ಶಿವಮೊಗ್ಗ

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ: ಕೈ ನಾಯಕರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕಾಂಗ್ರೆಸ್ ಪಕ್ಷ 'ಎಸ್ಐಆರ್' ವಿಚಾರವನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ KSE

ಶಿವಮೊಗ್ಗ: ಕಾಂಗ್ರೆಸ್ ಪಕ್ಷವು ‘ಎಸ್ಐಆರ್’ ವಿಚಾರವನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಇಷ್ಟೆಲ್ಲಾ ಚರ್ಚೆಗಳು ನಡೆಯುತ್ತಿರುವುದು ವಿಷಾದನೀಯ. ಸರ್ಕಾರ ತನ್ನ ಎಲ್ಲಾ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದಲೇ ಈ ನೆಪವಿಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಟೀಕಿಸಿದರು.

ಪ್ರಜಾಪ್ರಭುತ್ವದಲ್ಲಿ ಮತ ಕಸಿಯುವ ಹಕ್ಕು ಯಾರಿಗೂ ಇಲ್ಲ. ತಮ್ಮ ತಪ್ಪುಗಳನ್ನು ಮರೆಮಾಚಲು ನಾಯಕರು ಮತ್ತು ಸಚಿವರು ಚುನಾವಣಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ಮಾಡುವ ನಾಟಕವಾಡುತ್ತಿದ್ದಾರೆ. ಮತದಾರರ ಪಟ್ಟಿಯಿಂದ ಕೈಬಿಡಲಾದ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಆಯೋಗ ಈಗಾಗಲೇ ಅವಕಾಶ ನೀಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ವೀರಶೈವ ಲಿಂಗಾಯತ ಸ್ವಾಮೀಜಿಗಳ ಸಮಾವೇಶದಲ್ಲಿ, ‘ನಮ್ಮ ಸೇವೆ ಮಾಡಿ, ಆಗ ನಿಮಗೆ ಒಳ್ಳೆಯದಾಗುತ್ತದೆ’ ಎಂದು ಮಠಾಧೀಶರಿಗೆ ಆದೇಶಿಸುವ ಮೂಲಕ ನಾಯಕರು ತಮ್ಮ ಅಹಂಕಾರ ಪ್ರದರ್ಶಿಸಿದ್ದಾರೆ. ಇಂತಹ ದುರಹಂಕಾರದ ಮಾತುಗಳನ್ನಾಡಿದಾಗ ವೇದಿಕೆಯ ಮೇಲಿದ್ದ ಸ್ವಾಮೀಜಿಗಳು ಸ್ಥಳದಲ್ಲೇ ಅವರಿಗೆ ಛೀಮಾರಿ ಹಾಕಬೇಕಿತ್ತು ಎಂದು ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ಆರ್‌ಎಸ್‌ಎಸ್ ಅನ್ನು ದೇಶದಿಂದ ಹೊರಹಾಕುತ್ತೇವೆ ಎಂಬ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಅವರು, “ಅವರ ಅಪ್ಪ, ಅಜ್ಜಂದಿರಿಂದಲೇ ಇದು ಸಾಧ್ಯವಾಗಲಿಲ್ಲ, ಇನ್ನು ಇವರಿಂದೇನು ಮಾಡಲು ಸಾಧ್ಯ? ಈ ವಿಚಾರದಲ್ಲೂ ಅವರು ವಿಫಲರಾಗುವುದು ಖಚಿತ” ಎಂದು ತಿರುಗೇಟು ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!