ಹೊಸನಗರ

ವಿವಾಹದ ಸಂಭ್ರಮ ಮಾಸುವ ಮುನ್ನವೇ ದುರಂತ; ಬೆಂಗಳೂರಿನಲ್ಲಿ ಗರ್ತಿಕೆರೆ ಮೂಲದ ಯುವ ಇಂಜಿನಿಯರ್ ಸಾವು

ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಗರ್ತಿಕೆರೆ ಮೂಲದ ಯುವ ಇಂಜಿನಿಯರ್ ಸಾವು Suicide

ರಿಪ್ಪನ್‌ಪೇಟೆ: ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ಕಮ್ಮಚ್ಚಿ ಗ್ರಾಮದ ನಿವಾಸಿ ದೀಕ್ಷಿತ್ (28) ಮೃತ ಯುವಕ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ, ಉದ್ಯೋಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಾಗಿದ್ದನು.

ಭಾನುವಾರ ತಡರಾತ್ರಿ ತಮ್ಮ ವಾಸದ ಕೊಠಡಿಯಲ್ಲಿ ದೀಕ್ಷಿತ್ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮಾಹಿತಿ ದೊರೆತ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ದೀಕ್ಷಿತ್ ಕಳೆದ ತಿಂಗಳ 30 ರಂದು ವಿವಾಹವಾಗಿದ್ದನು ಎನ್ನಲಾಗಿದ್ದು, ಮದುವೆಯ ಸಂಭ್ರಮದ ಬಳಿಕ ನಡೆದ ಈ ದುರಂತ ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರಿಗೆ ಆಘಾತವನ್ನುಂಟು ಮಾಡಿದೆ.

ಘಟನೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸಾವಿಗೆ ಕಾರಣವಾಗಿರುವ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಯುವ ಇಂಜಿನಿಯರ್‌ನ ಅಕಾಲಿಕ ನಿಧನದಿಂದ ಕಮ್ಮಚ್ಚಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರು ಹಾಗೂ ಆಪ್ತರ ಆಕ್ರಂದನ ಮುಗಿಲು ಮುಟ್ಟಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!