ಸಾಗರ ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ !

Written by Mahesha Hindlemane

Published on:

ಸಾಗರ ; ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಇಂದು ಮಧ್ಯಾಹ್ನ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ ವರ್ತಕರಾದ ಆರ್.ಕೆ. ನಾಗರಾಜ್ ಅವರ ಪುತ್ರನಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಯಲ್ಲಿ ಯುವಕನ ರುಂಡ-ಮುಂಡ ಬೇರ್ಪಟ್ಟಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಘಟನೆಯಿಂದಾಗಿ ರೈಲು ಕೆಲಕಾಲ ಸ್ಥಳದಲ್ಲೇ ನಿಲ್ಲುವಂತಾಗಿತ್ತು. ಸಾಗರ ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment