ರಿಪ್ಪನ್‌ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ.

ಗಾಜಿನಗೋಡು ಗ್ರಾಮದ ಕೇಶವ್ (28) ಮೃತ ದುರ್ಧೈವಿ. ಬಿಳಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗುತ್ತಿಗೆದಾರ ದೇವರಾಜ್ ಎಂಬುವರೊಂದಿಗೆ ಈತ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
