ಶಿವಮೊಗ್ಗ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು !

ಶಿವಮೊಗ್ಗ : ಹುಟ್ಟುಹಬ್ಬದ ಔತಣಕೂಟವೊಂದರಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿ ಕೊಂಡ ಪರಿಣಾಮವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಚಿನ್ (21) ಮೃತ ಯುವಕ ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರು ಜನ್ಮ ದಿನದ ಹಿನ್ನೆಲೆ ಗ್ರಾಮದ ಹೊರಗಡೆ ಕಟ್ಟಿಸುತ್ತಿದ್ದ ಮನೆಯ ಬಳಿ ಔತಣಕೂಟ ಏರ್ಪಡಿಸಿದ್ದರು. ಇದೇ ವೇಳೆ ಸಚಿನ್ ಊಟ ಹಾಕಿಸಿಕೊಂಡು ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ ಹೋಗಿದ್ದಾರೆ. ಊರಿನವರೆಲ್ಲರೂ ಊಟ ಮುಗಿಸಿಕೊಂಡು ಮನೆಗೆ ಹೋಗಿದ್ದಾರೆ.

ಶುಕ್ರವಾರ ಬೆಳಗ್ಗೆ ಮನೆ ಕಾಮಗಾರಿ ಮಾಡಲು ಹೋದ ಕೆಲಸಗಾರರು ನೋಡಿದಾಗ ಸಚಿನ್ ಮೃತಪಟ್ಟಿರುವುದು ಕಂಡುಬಂದಿದೆ. ವಿಷಯ ತಿಳಿದ ಸಚಿನ್ ಕುಟುಂಬಸ್ಥರು ಮೃತದೇಹವನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಗ್ರಾಮಸ್ಥರು ಕುಂಸಿ ಠಾಣೆಗೆ ವಿಷಯ ತಿಳಿಸಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಸಚಿನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಸಚಿನ್ ಮದ್ಯ ಸೇವಿಸಿದ್ದು, ಚಿಕನ್ ಮೂಳೆ ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]