ರಿಪ್ಪನ್‌ಪೇಟೆ ; ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತನನ್ನು ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಸೆ ಗ್ರಾಮದ ನಿವಾಸಿ ಶಿವಪ್ಪ ಎಂಬುವರ ಪುತ್ರ ಮಂಜುನಾಥ (35) ಎಂದು ಗುರುತಿಸಲಾಗಿದೆ. ಘಟನೆಯಾಗುವ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ರೋಹಿತ್ (26) ಸಣ್ಣಪುಟ್ಟ ಗಾಯಗೊಂಡು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದಾನೆ.
ಈ ಘಟನೆ ಸಂಬಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





