ಭದ್ರಾವತಿ

ಪಂಪ್‌ಸೆಟ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ ; ಯುವಕ ಸ್ಥಳದಲ್ಲೇ ಸಾವು !

BHADRAVATHI ; ಪಂಪ್‌ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ದರ್ಶನ್ (20) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ನೀರು ಹಾಯಿಸಲು ತೋಟಕ್ಕೆ ಹೋಗಿದ್ದ ದರ್ಶನ್ ಪಂಪ್‌ಸೆಟ್ ಸ್ವಿಚ್ ಆಫ್ ಮಾಡುವಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ.

ಅಕ್ಕ ಪಕ್ಕದ ಜಮೀನಿನವರು ಇದನ್ನು ಗಮನಿಸಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>