ರಿಪ್ಪನ್‌ಪೇಟೆ ; ಬಾವಿಯಲ್ಲಿ ಯುವಕನ ಮೃ*ತದೇಹ ಪತ್ತೆಯಾದ ಘಟನೆ ನೆವಟೂರು ಗ್ರಾಮದಲ್ಲಿ ನಡೆದಿದೆ.
ನೆವಟೂರು ಗ್ರಾಮದ ಆನಂದ್ (30) ಮೃ*ತ ಯುವಕ. ಇಂದು ಬೆಳಗ್ಗೆ ಈತನ ಮನೆ ಸಮೀಪದ ಬಾವಿಯಲ್ಲಿ ಮೃ*ತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು ಬೆಳಿಗ್ಗೆಯಿಂದ ಕಾಣೆಯಾಗಿದ್ದು ಈತನಿಗಾಗಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಶ*ವವಾಗಿ ಪತ್ತೆಯಾಗಿದ್ದಾನೆ.
ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಜಾಲುಜಾರಿ ಬಿದ್ದಿ ಸಾವನ್ನಪ್ಪಿದ್ದೋ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.