Accident

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ, ಯೋಗಪಟು ಹರ್ಷ ದುರ್ಮರಣ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ ಸಾವು Accident

ಭದ್ರಾವತಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಭದ್ರಾವತಿಯ ನಿವಾಸಿ ಹರ್ಷ (28) ಮೃತ ಕಲಾವಿದ. ಹರ್ಷ ಅವರು ಯೋಗಪಟು ಹಾಗೂ ರಂಗ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

ಸಂಬಂಧಿಯೊಬ್ಬರನ್ನು ಭದ್ರಾವತಿಗೆ ಬಿಟ್ಟು ಬರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಹರ್ಷ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!