ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ !

Written by malnadtimes.com

Published on:

SHIVAMOGGA ; ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿಯೋರ್ವಳು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೊನ್ನೆ ಅಷ್ಟೇ ಶಿವಮೊಗ್ಗದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮೊಬೈಲ್ ನೋಡಬೇಡ ಎಂದು ಫೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯ ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30ಕ್ಕೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.

ಮೊಬೈಲ್ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.

ಧನುಶ್ರೀ

ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಧನುಶ್ರೀ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು. ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊನ್ನೆಯಷ್ಟೇ ಟಿವಿ ರಿಮೋಟ್ ಕೊಡಲಿಲ್ಲವೆಂದು ಅಜ್ಜಿ ಬೈದಿದ್ದಕ್ಕೆ ಬೇಸರಗೊಂಡ ಮೊಮ್ಮಗಳು 16 ವರ್ಷದ ಸಹನಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಶಿವಮೊಗ್ಗ ನಗರದ ಸೂಳೆಬೈಲಿನಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಭದ್ರಾವತಿ ತಾಲೂಕಿನ ಕಲ್ಲಿಹಾಳ್​ ನಿವಾಸಿಯಾಗಿದ್ದ ಸಹನಾ, ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ, ಅಜ್ಜಿ ಬೈದಿದ್ದಕ್ಕೆ ಇಲಿ ಪಾಷಾಣ ಸೇವಿಸಿ ಪ್ರಾಣ ಬಿಟ್ಟಿದ್ದಾಳು. ಇದರ ಬೆನ್ನಲ್ಲೇ ಇದೀಗ ಮೊಬೈಲ್ ವಿಚಾರಕ್ಕೆ ಮತ್ತೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Leave a Comment