ರಿಪ್ಪನ್ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್ಕುಮಾರ್ ಎಂಬುವರು ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತೆಯೊಂದಿಗೆ ದೇವಸ್ಥಾನವೊಂದರಲ್ಲಿ ಆ. 29 ರಂದು ವಿವಾಹವಾಗಿದ್ದು ಕಳೆದ ಕೆಲ ದಿನಗಳಿಂದ ಯುವಕ ಬಾಲಕಿ ಮನೆಯಲ್ಲಿ ವಾಸವಿರುವ ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಶಿವಮೊಗ್ಗ ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿ ದಾಳಿ ನಡೆಸಿದರು.
ಅಪ್ರಾಪ್ತೆಯೊಂದಿಗೆ ಆತ ವಿವಾಹವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪಿಎಸ್ಐ ರಾಜುರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.